ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು; ಮನೆಯಲ್ಲಿ ಒಂದು ಮುಖ, ಬೀದಿಯಲ್ಲೊಂದು ಮುಖ- ಬಿಜೆಪಿ ವಿರುದ್ಧ ಜೆಡಿಎಸ್ ಸರಣಿ ಟ್ವೀಟ್ | Janata dal secular twitted against bjp and family politics


ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು; ಮನೆಯಲ್ಲಿ ಒಂದು ಮುಖ, ಬೀದಿಯಲ್ಲೊಂದು ಮುಖ- ಬಿಜೆಪಿ ವಿರುದ್ಧ ಜೆಡಿಎಸ್ ಸರಣಿ ಟ್ವೀಟ್

ಬಿಜೆಪಿ ಮತ್ತು ಜೆಡಿಎಸ್ ಚಿಹ್ನೆ

ಬೆಂಗಳೂರು: ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ, ಬೀದಿಯಲ್ಲಿ ಇನ್ನೊಂದು ಮುಖ ಅಂತ ಜೆಡಿಎಸ್ ಟ್ವೀಟ್ ಮಾಡಿದೆ. ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ಆಪರೇಷನ್ ಕಮಲದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ ಎಂದು ಬಿಜೆಪಿ ವಿರುದ್ಧ ರಾಜ್ಯ ಜೆಡಿಎಸ್ ಘಟಕ ಸರಣಿ ಟ್ವೀಟ್ ಮಾಡಿದೆ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಟ್ವೀಟ್ ಮಾಡಿದ ಜೆಡಿಎಸ್ ಘಟಕ, ಯಡಿಯೂರಪ್ಪ ಕುಟುಂಬ, ಬಳ್ಳಾರಿ ರೆಡ್ಡಿ ಕುಟುಂಬ, ಜಾರಕಿಹೊಳಿ ಕುಟುಂಬ, ಅರವಿಂದ ಲಿಂಬಾವಳಿ ಕುಟುಂಬ, ಉದಾಸಿ ಕುಟುಂಬ ಉಲ್ಲೇಖ ಮಾಡಿದೆ.

ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆ ಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ? ಎಂದು ಜೆಡಿಎಸ್ ಟ್ವೀಟ್ ಮೂಲಕ ಪ್ರಶ್ನಿಸಿದ್ದು, ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗುರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರ ಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ ಎಂದು ಕಿಡಿಕಾರಿದೆ.

ಇದನ್ನೂ ಓದಿ

ಸಹೋದರಿಯ ರಾಜಕೀಯ ಪ್ರವೇಶ ಘೋಷಿಸಿದ ನಟ ಸೋನು ಸೂದ್, ಯಾವ ಪಕ್ಷಕ್ಕೆ ಎಂಬುದು ಶೀರ್ಘ್ರದಲ್ಲೇ ನಿರ್ಧಾರ

ಎಲ್ಲೆಂದರಲ್ಲಿ ಪ್ಲ್ಯಾಸ್ಟಿಕ್ ತ್ಯಾಜ್ಯ, ಮಳೆ ನೀರು ಹೋಗಲು ಅಡ್ಡಿ; ಜಲಮಯವಾಗುತ್ತಾ ಸಿಲಿಕಾನ್ ಸಿಟಿ

TV9 Kannada


Leave a Reply

Your email address will not be published. Required fields are marked *