ಬಿಟ್​​ಕಾಯಿನ್ ​ಹಗರಣದ ಆರೋಪಿ ಶ್ರೀಕಿ ಪ್ರಾಣಕ್ಕೆ ಅಪಾಯವಿದೆ-ಸಿದ್ದರಾಮಯ್ಯ ಹೊಸ ಬಾಂಬ್​


ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಬಿಟ್​ ಕಾಯಿನ್​ ಪ್ರಕರಣದ ವಿಷಯವಾಗಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್​ ಮಾಡಿ ಆಡಳಿತಾರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಬಿಟ್​ ಕಾಯಿನ್​​ ಕೇಸ್​ನ ಪ್ರಮುಖ ಆರೋಪಿ ಎನ್ನಲಾಗುತ್ತಿರುವ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿಗೆ ಪ್ರಾಣಕ್ಕೆ ಅಪಾಯದ ಸಾಧ್ಯತೆಗಳಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್​​ ಮಾಡಿದ ಅವರು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಬಿಟ್​​​​​ ಕಾಯಿನ್​ ಹಗರಣ ತಂತ್ರಜ್ಞಾನ ಅವಲಂಬಿಸಿರುವ ಬಿಳಿ ಕಾಲರ್​ ಅಪರಾಧವಾಗಿದೆ. ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ. ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ. ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:ಬಿಟ್​ ಕಾಯಿನ್​ ಕೇಸ್ನಲ್ಲಿ ED ಮೊದಲು ಸಿದ್ದರಾಮಯ್ಯಗೆ ನೋಟಿಸ್​ ನೀಡಲಿ- ಪ್ರತಾಪ್​ ಸಿಂಹ

ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತುಗಳ ಚಟ ಇರೋದಾಗಿ ಹೇಳಲಾಗಿದೆ. ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಇಲ್ಲಿ ಗಮನಾರ್ಹ. ಆದರೆ ಶ್ರೀಕಿ ಈಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಡಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ? ಎಂಬ ಪ್ರಶ್ನೆಗಳಿಗೆ ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಉತ್ತರ ನೀಡಬೇಕೆಂದು ಸಿದ್ದರಾಮಯ್ಯ ಟ್ವೀಟ್​ ಮಾಡಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಪ್ರತಾಪ್​ ಸಿಂಹಗೆ ಇಮ್ಮೆಚುರ್ಡ್ ರಾಜಕಾರಣಿ ಎಂದ ಸಿದ್ದರಾಮಯ್ಯ

News First Live Kannada


Leave a Reply

Your email address will not be published.