ಬಸವರಾಜ್ ಬೊಮ್ಮಾಯಿ (ಸಂಗ್ರಹ ಚಿತ್ರ)
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಚರ್ಚೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬೊಮ್ಮಾಯಿ ಇಂದು (ನವೆಂಬರ್ 13) ಚರ್ಚೆ ಮಾಡಿದ್ದಾರೆ. ಬೆಳಗ್ಗೆ, ಮಧ್ಯಾಹ್ನ 2 ಸಲ ಅಧಿಕಾರಿಗಳನ್ನು ಕರೆಸಿ ಚರ್ಚೆ ನಡೆಸಲಾಗಿದೆ. ತನಿಖೆಯ ಪ್ರಗತಿ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜೊತೆ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ.
ಅನುಗ್ರಹ ಯೋಜನೆ ಮುಂದುವರಿಸಿದ್ದಕ್ಕೆ ಸಿಎಂಗೆ ಸನ್ಮಾನ ಮಾಡಲಾಗಿದೆ. ಕುರಿ, ಮೇಕೆ ಆಕಸ್ಮಿಕ ಮರಣಕ್ಕೆ ಪರಿಹಾರ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದುವರಿಸಿದ್ದಕ್ಕೆ ಸನ್ಮಾನ ಮಾಡಲಾಗಿದೆ. ಗೃಹಕಚೇರಿ ಕೃಷ್ಣಾದಲ್ಲಿ ಶರಣು ತಳ್ಳಿಕೇರಿಯಿಂದ ಸಿಎಂಗೆ ಸನ್ಮಾನ ಮಾಡಲಾಗಿದೆ. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮನವಳ್ಳಿ, ಬಸವರಾಜ್ ದಡೇಸುಗೂರು ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸಿದ್ದಾರೆ.
ಇದನ್ನೂ ಓದಿ: ಬಿಟ್ಕಾಯಿನ್ ಪ್ರಕರಣ ತನಿಖೆ ಬಗ್ಗೆ ಪ್ರಧಾನಿ ಮೋದಿ ಮೇಲೆ ನಂಬಿಕೆ ಇಡೋಣ: ಹೆಚ್ಡಿ ಕುಮಾರಸ್ವಾಮಿ