ಬಳ್ಳಾರಿ: ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಬೀಜ ಖರೀದಿಗೆಂದು ಬಂದ ರೈತರು ನೂಕು-ನುಗ್ಗಲು ನಡೆಸಿದ್ದಾರೆ. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿ ಬೀಸಿರುವ ಘಟನೆ ನಡೆದಿದೆ.

ಜಿಲ್ಲೆಯ ತಹಶೀಲ್ದಾರ ಕಚೇರಿ ಆವರಣದಲ್ಲಿರೋ ರೈತ ಸಂಪರ್ಕ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರೈತರಿಗೆ ಸಮರ್ಪಕವಾಗಿ ಬೀಜ ನೀಡ್ತಿಲ್ಲ ಅಂತಾ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಮೆಣಸಿನಕಾಯಿ ಬೀಜ ಖರೀದಿಗೆ ಬಂದಿದ್ದ ರೈತರು ಅಲ್ಲಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಈ ಗಲಾಟೆಯನ್ನ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.

The post ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಗಲಾಟೆ; ರೈತರ ಮೇಲೆ ಲಾಠಿ ಪ್ರಹಾರ appeared first on News First Kannada.

Source: newsfirstlive.com

Source link