ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ: ಸಿಎಂ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್ | CM Basavaraj Bommai Visits Chickpet Shantinagar Gandhi bazaar BJP Preparing for BBMP Election


ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ: ಸಿಎಂ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್

ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷಕ್ಕೆ (ಆಪ್) ಸೇರ್ಪಡೆಯಾಗಿದ್ದ ಭಾಸ್ಕರ್​ ರಾವ್ ಸಹ ಸಿಎಂ ಜೊತೆ ದೋಸೆ ಸವಿದಿದ್ದು ಹಲವರ ಗಮನ ಸೆಳೆಯಿತು.

ಬೆಂಗಳೂರು: ಬಿಬಿಎಂಪಿ ಚುನಾವಣೆ (BBMP Election) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ರಾಜಕೀಯ ಚಟುವಟಿಕೆಗಳು  (Politics) ಗರಿಗೆದರಿವೆ. ಪಾಲಿಕೆ ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavarj Bommai) ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇತ್ತೀಚೆಗಷ್ಟೇ ರಾಜರಾಜೇಶ್ವರಿನಗರ, ಕೃಷ್ಣರಾಜಪುರಂ ಕ್ಷೇತ್ರಗಳಲ್ಲಿ ಸಂಚರಿಸಿದ್ದ ಬೊಮ್ಮಾಯಿ, ಇಂದು ಇಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸುತ್ತಾಡಿದರು. ಶಾಸಕ ಉದಯ ಗರುಡಾಚಾರ್​, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಿಎಂ ಜೊತೆಗಿದ್ದರು. ಶಾಂತಿನಗರದಲ್ಲಿ ನಾಗರಿಕ ಜಲಮಾರ್ಗ ಯೋಜನೆ ವೀಕ್ಷಿಸಿದ ನಂತರ ಕೋರಮಂಗಲ ಕಣಿವೆ ‘ಕೆ-100‘ ಉದ್ಘಾಟಿಸಿದರು.

ಚಾಮರಾಜಪೇಟೆಯ ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ದೋಸೆ ಸವಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್​ ಉಪಸ್ಥಿತರಿದ್ದರು. ಗಾಂಧಿ ಬಜಾರ್​ ಸುತ್ತಾಟದ ವೇಳೆ ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷಕ್ಕೆ (ಆಪ್) ಸೇರ್ಪಡೆಯಾಗಿದ್ದ ಭಾಸ್ಕರ್​ ರಾವ್ ಕಾಣಿಸಿಕೊಂಡರು. ಅವರೂ ಸಹ ಸಿಎಂ ಜೊತೆ ದೋಸೆ ಸವಿದಿದ್ದು ಹಲವರ ಗಮನ ಸೆಳೆಯಿತು.

ನಾರಾಯಣ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ತೆರಳಿದ ಸಿಎಂ ನಾರ್ಮಲ್ ಚೆಕಪ್​​ ಮಾಡಿಸಿಕೊಂಡರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇನ್ನು ಎರಡುಮೂರು ತಿಂಗಳಲ್ಲಿ ಚಿಕ್ಕಪೇಟೆ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಲಾಗುವುದು. ನಾಗರಿಕ ಕಾಲುವೆ ಯೋಜನೆಯೂ ಶೀಘ್ರ ಆರಂಭವಾಗಲಿದೆ. ಈ ಯೋಜನೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಯೋಜನೆ ರೂಪಿಸಲಾಗಿದೆ. ಇದೇ ವಾರ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಲಿಸಲಿದ್ದು, 15 ಸಾವಿರ ಕೋಟಿ ಯೋಜನೆಯ ಸಬ್​ ಅರ್ಬನ್ ರೈಲು ಯೋಜನೆಗೆ ಅಡಿಗಲ್ಲು ಹಾಕುತ್ತಾರೆ. ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಅವರು ಘೋಷಿಸಲಿದ್ದಾರೆ.

ಕೃಷ್ಣರಾಜೇಂದ್ರ ಮಾರುಕಟ್ಟೆಗೆ (KR Market) ಭೇಟಿ ನೀಡಿ ಪರಿಶೀಲಿಸಿದ ಅವರು, ಕೆ.ಆರ್.ಮಾರ್ಕೆ‌ಟ್‌ಗೂ ನನಗೂ ಹಳೆಯ ಸಂಬಂಧವಿದೆ. ನನ್ನ ಕೈಗಾರಿಗೆ ಇದೆ. ಎಸ್​ಜೆಪಿ ರಸ್ತೆಗೂ ಆಗಾಗ ಬರುತ್ತಿರುತ್ತೇನೆ. ಬಹಳ ಸಂತೋಷದಿಂದ ಚಿಕ್ಕಪೇಟೆ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಚಿಕ್ಕಪೇಟೆಯಲ್ಲಿ ಬಿಬಿಎಂಪಿ, ನಗರಾಭಿವೃದ್ಧಿ ಇಲಾಖೆ ಹೊಸ ಯೋಜನೆ ಮಾಡುತ್ತಿದ್ದಾರೆ. ರಾಜಕಾಲುವೆ ನೀರಿನ ಮಾರ್ಗ ಬದಲಾವಣೆ ಮಾಡಿ, ಶುದ್ಧ ನೀರನ್ನು ಕಾಲುವೆಗೆ ಬಿಟ್ಟು ಅದರ ಅಕ್ಕಪಕ್ಕ ಗಾರ್ಡನ್ ಮಾಡಿ ಜನರಿಗೆ ಓಡಾಡಲು ಅನುಕೂಲ ಕಲ್ಪಿಸುತ್ತಿದ್ದಾರೆ ಎಂದು ಹೇಳಿದರು.

ಮೆಜೆಸ್ಟಿಕ್‌ನಿಂದ ಶುರು ಮಾಡಿ, ಬೆಳ್ಳಂದೂರುವರೆಗೂ 23 ಕಿಮಿ ಪ್ರದೇಶದಲ್ಲಿ ಈ ಯೋಜನೆ ಜಾರಿಯಾಗಲಿದೆ. ಬೆಂಗಳೂರಿನ ಬಗ್ಗೆ ದೂರದೃಷ್ಟಿ ಇಟ್ಟುಕೊಂಡಿದ್ದ ಯಡಿಯೂರಪ್ಪನವರು ಈ ಯೋಜನೆಗೆ ಅನುದಾನ ನೀಡಿದ್ದರು. ಇನ್ನೂ ಎರಡು ಮೂರು ತಿಂಗಳಲ್ಲಿ ಚಿಕ್ಕಪೇಟೆ ಕ್ಷೇತ್ರದಲ್ಲಿ ನಾಗರಿಕ ಕಾಲುವೆ ಯೋಜನೆಯನ್ನೆ ಯಡಿಯೂರಪ್ಪನವರಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ಬೃಹತ್ ಆಗಿ ಬೆಳೆಯುತ್ತಿದೆ. ಪ್ರತಿದಿನ 5 ಸಾವಿರ ಹೊಸ ಗಾಡಿಗಳು ರಸ್ತೆಗೆ ಇಳಿಯುತ್ತವೆ. ಬೆಂಗಳೂರು ಟ್ರಾಫಿಕ್ ತಡೆಗಟ್ಟಲು ಅನೇಕ ಯೋಜನೆ ಹಮ್ಮಿಕೊಳ್ಳಲಾಗಿದೆ. ಇದೇ ವಾರ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಸಬ್ ಅರ್ಬನ್ ರೈಲು ಯೋಜನೆಗೆ ಅಡಿಗಲ್ಲು ಹಾಕುತ್ತಾರೆ. ಬೆಂಗಳೂರು ಅಭಿವೃದ್ಧಿಗೆ ಎಂಟು ಸಾವಿರ ಕೋಟಿ ಅನುದಾನ ನೀಡಲಾಗಿದೆ. ಒಂಟಿ ಮನೆ ಯೋಜನೆಯನ್ನು ಬೆಂಗಳೂರಿನಲ್ಲಿ ಚಾಲನೆ ನೀಡಲಾಗುವುದು. ಬೆಂಗಳೂರಿನಲ್ಲಿ ಜಾಗ ಇದ್ದವರು ಮನೆ ಕಟ್ಟಿಕೊಳ್ಳಲು ನಾಗರಿಕ ಕಾನೂನಾತ್ಮಕ ತೊಡಕುಗಳನ್ನು ಬಗೆಹರಿಸುತ್ತೇವೆ ಎಂದರು.

ಬೆಂಗಳೂರು ನಗರದ ನಿರ್ವಹಣೆ ವ್ಯವಸ್ಥಿತವಾಗಿ ಆಗಬೇಕು. ಬೆಂಗಳೂರಿನ 20 ಶಾಲೆಗಳಿಗೆ ಅತ್ಯಾಧುನಿಕ ಸೌಕರ್ಯ ಒದಗಿಸಲು ಕ್ರಮ ತೆಗೆದುಕೊಂಡಿದ್ದೇವೆ. ಕಲಾಸಿಪಾಳ್ಯದ ಮೋತಿನಗರದಲ್ಲಿ ಬಹುಮಹಡಿ ಕಟ್ಟಡವನ್ನು ಅವರು ಉದ್ಘಾಟಿಸಿದರು. ಕಲಾಸಿಪಾಳ್ಯದ ಮೋತಿನಗರದಲ್ಲಿ ಬಹುಮಹಡಿ ಕಟ್ಟಡ ಉದ್ಘಾಟನೆ ಮಾಡಿದರು.

ರಾಮಲಿಂಗಾರೆಡ್ಡಿ ಆಕ್ಷೇಪ

ಸಿಎಂ ಬೊಮ್ಮಾಯಿ ನಗರ ಸಂಚಾರಕ್ಕೆ ಕಾಂಗ್ರೆಸ್​ ಆಕ್ಷೇಪ ವ್ಯಕ್ತಪಡಿಸಿದೆ. ಬಿಬಿಎಂಪಿ ಚುನಾವಣೆ ಬರುತ್ತಿರುವುದರಿಂದ ಸಿಎಂ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ನಗರದ ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಯಾವುದೇ ಅನುದಾನ ನೀಡಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಮಂಜೂರು ಮಾಡಿಲ್ಲ. ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಮಾತ್ರ ಸಿಎಂ ರೌಂಡ್ಸ್ ಹಾಕಿದ್ದಾರೆ. ಉಳಿದ ಶಾಸಕರ ಕ್ಷೇತ್ರಗಳಿಗೆ ಸಿಎಂ ಭೇಟಿ ನೀಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ಷೇಪಿಸಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

TV9 Kannada


Leave a Reply

Your email address will not be published.