ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನ 6 ತಿಂಗಳ ಕಾಲ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಹಿನ್ನೆಲೆ ಬಿಬಿಎಂಪಿ ಚುನಾವಣೆಯನ್ನ ಮುಂದೂಡುತ್ತಿರುವುದಾಗ ರಾಜ್ಯ ಸರ್ಕಾರ ಹೇಳಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ,‌ ಉಪಚುನಾವಣೆಗಳು ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆಯನ್ನೂ ಮುಂದೂಡಿಕೆ ಮಾಡಲಾಗಿದೆ. ಸಚಿವ ಸಂಪುಟದ ತೀರ್ಮಾನದಂತೆ 6 ತಿಂಗಳ ಅವಧಿಗೆ ಚುನಾವಣೆ ಮುಂದೂಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಜನವರಿ ತಿಂಗಳಿನಲ್ಲೂ ಆಗ ಬಿಬಿಎಂಪಿ ಕಮಿಷನರ್ ಆಗಿದ್ದ ಮಂಜುನಾಥ್ ಆರು ತಿಂಗಳ ಕಾಲ ಬಿಬಿಎಂಪಿ ಚುನಾವಣೆ ನಡೆಯುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: 6 ತಿಂಗಳವರೆಗೆ ಬಿಬಿಎಂಪಿ ಚುನಾವಣೆ ಇಲ್ಲ: ಕಮಿಷನರ್ ಮಂಜುನಾಥ್ ಪ್ರಸಾದ್

The post ಬಿಬಿಎಂಪಿ ಚುನಾವಣೆ ಸದ್ಯಕ್ಕಿಲ್ಲ: 6 ತಿಂಗಳ ಅವಧಿಗೆ ಮುಂದೂಡಿದ ರಾಜ್ಯ ಸರ್ಕಾರ appeared first on News First Kannada.

Source: newsfirstlive.com

Source link