ಬೀದರ್: 80 ಹಳ್ಳಿಗಳಲ್ಲಿ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಸಾರಿಗೆ ಸಚಿವರಿಗೆ ಮನವಿ | Students in 80 villages are struggling without a bus system in Bidar


ಬೀದರ್: 80 ಹಳ್ಳಿಗಳಲ್ಲಿ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಸಾರಿಗೆ ಸಚಿವರಿಗೆ ಮನವಿ

ಬಸ್ ಇಲ್ಲದೆ ನಡೆದು ಹೋಗುತ್ತಿರುವ ವಿದ್ಯಾರ್ಥಿಗಳು

ಬೀದರ್: ಕೊರೊನಾ ಕಾರಣದಿಂದ ಸುಮಾರು ಒಂದೂವರೆ ವರ್ಷ ಶಾಲೆಗಳು ಬಂದ್ ಆಗಿದ್ದವು. ಲಾಕ್​ಡೌನ್​ನಿಂದ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಆದರೆ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಶಾಲೆಗಳು ತೆರೆದಿದ್ದು, ಮಕ್ಕಳು ಶಾಲೆಗೆ ಆಗಮಿಸುತ್ತಿದ್ದಾರೆ. ಆದರೆ ಸದ್ಯ ಜಿಲ್ಲೆಯ ಹಳ್ಳಿಗಳಲ್ಲಿ ಬಸ್ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳು ಪರಡಾಡುತ್ತಿದ್ದಾರೆ.

ಬೀದರ್ ಜಿಲ್ಲೆಯ ಸುಮಾರು 80 ಹಳ್ಳಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ. ಮಕ್ಕಳು ನಡೆದುಕೊಂಡೇ ಶಾಲೆಗಳಿಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಕೆಲ ಗ್ರಾಮಗಳಲ್ಲಿ ಬಸ್ ಇಲ್ಲ. ಇನ್ನು ಕೆಲ ಗ್ರಾಮಗಳಲ್ಲಿ ಬಸ್ ಇದ್ದರೂ ಸಮಯಕ್ಕೆ ಸರಿಯಾಗಿ ಬರಲ್ಲ. ಹೀಗಾಗಿ ಮಕ್ಕಳು ನಡೆದುಕೊಂಡು ಹೋಗಿ ಶಿಕ್ಷಣ ಪಡೆಯಬೇಕಾಗಿದೆ. ಸಮಯಕ್ಕೆ ಸರಿಯಾಗಿ ಬಸ್ ಬಿಡಿ, ಬಸ್ ಹೋಗದ ಊರಿಗೂ ಬಸ್ ಬಿಡಿ ಅಂತ ಎಬಿವಿಪಿ ಕಾರ್ಯಕರ್ತರು ಸಾರಿಗೆ ಸಚಿವರಿಗೆ ಮನವಿ ಮಾಡಿದ್ದಾರೆ.

ಹೆಣ್ಣು ಮಕ್ಕಳು ನಡೆದುಕೊಂಡೆ ಶಾಲೆಗೆ ಹೋಗುತ್ತಿದ್ದಾರೆ. ಸುಮಾರು 4ರಿಂದ 5ಕಿಲೋಮೀಟರ್ ನಡೆದು ಶಾಲೆಗೆ ಹೋಗುತ್ತಿದ್ದಾರೆ. ಮಕ್ಕಳಿಗೆ ತುಂಬಾ ಸುಸ್ತಾಗುತ್ತಿದೆ. ಬಸ್ ವ್ಯವಸ್ಥೆಯಿಲ್ಲದೆ ರಾತ್ರಿ ವೇಳೆ ನಡೆದುಕೊಂಡು ಬರುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕೇರ್ ಮಾಡುತ್ತಿಲ್ಲ ಅಂತ ಮಹಿಳೆಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ ಬಸ್ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 80 ಹಳ್ಳಿಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ಪರದಾಡುವಂತಹ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಅಧಿಕಾರಿಗಳು ಎಚ್ಚೆತ್ತುಕೊಂಡು ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ

Viral Video: ಕಡಲ ತೀರದಲ್ಲಿ ಅಲೆಗಳ ಜೊತೆ ಆಟವಾಡುತ್ತಿದ್ದ ನಾಗರ ಹಾವು!

ಎರಡು ವರ್ಷಗಳಿಂದ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಬಂದ್; ಮನನೊಂದ ಕಾರ್ಮಿಕ ಆತ್ಮಹತ್ಯೆಗೆ ಶರಣು

TV9 Kannada


Leave a Reply

Your email address will not be published.