ಬೆಂಗಳೂರಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ – Vande Mataram activists making different protest against Karnataka government for Bengaluru potholeಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಂದೇ ಮಾತರಂ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ

TV9kannada Web Team


| Edited By: Vivek Biradar

Oct 24, 2022 | 6:46 PM
ಬೆಂಗಳೂರಲ್ಲಿ ವಂದೇ ಮಾತರಂ ಸಂಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ಆರಂಭವಾಗಿದೆ. ನಗರದಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುಂಡಿಯಲ್ಲಿ ದೀಪ ಹಚ್ಚಿ ಪಾಟ್ ಹೋಲ್ ದೀಪಾವಳಿ ಆಚರಣೆ ಮಾಡುತ್ತಿದ್ದಾರೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿನ ಗುಂಡಿಯಲ್ಲಿ ಬಾಳೆದಿಂಡು, ಹೂ ಹಾಕಿ ದೀಪ ಹಚ್ಚುವ ಮೂಲಕ ಗುಂಡಿ ಮುಚ್ಚದ ಸರ್ಕಾರದ ವಿರುದ್ದ ವ್ಯಂಗ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆ ಗುಂಡಿಗಳಿಗೆ ಅನೇಕರು ಪ್ರಾಣ ಕಳೆದುಕೊಂಡಿದ್ದು, ಗುಂಡಿ ಮುಚ್ಚುವಂತೆ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

TV9 Kannada


Leave a Reply

Your email address will not be published.