ಬೆಂಗಳೂರು: ನಗರದಲ್ಲಿ ಇಂದು ಸಂಜೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಸಹಜವಾಗಿಯೇ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ರಸ್ತೆ ತುಂಬಾ ನೀರು ನಿಂತಿದ್ದರಿಂದ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಜೊತೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಗಿದೆ.

ಮೆಜೆಸ್ಟಿಕ್​, ಜೆ.ಪಿ.ನಗರ, ಲಾಲ್​ಬಾಗ್​, ಕಾಪೋರೇಷನ್, ಕೆಆರ್ ಸರ್ಕಲ್, ಕಾರ್ಪೊರೇಷನ್, ಜೆಸಿ ರೋಡ್,
ಮೈಸೂರ್ ರೋಡ್, ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ ಸೇರಿಂದತೆ ಹಲವಡೆ ಭಾರೀ ಮಳೆ ಸುರಿದಿದ್ದರಿಂದ ವಿದ್ಯುತ್​​ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

The post ಬೆಂಗಳೂರಲ್ಲಿ ಆರ್ಭಟಿಸಿ ಬೊಬ್ಬಿರಿದ ಮಳೆರಾಯ.. ಜನಜೀವನ ಅಸ್ತವ್ಯಸ್ತ appeared first on News First Kannada.

Source: newsfirstlive.com

Source link