ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ. ಅದರಂತೆ ಮಧ್ಯಾಹ್ನ ಅರಮನೆ ಮೈದಾನದ ಗಾಯತ್ರಿ ವಿಹಾರ್ನಲ್ಲಿ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ ನಮನ ಸಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಮಂತ್ರಣ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಬರುವ ನಿರೀಕ್ಷೆ ಇದೆ. ಜೊತೆಗೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿ ದೊಡ್ಮನೆ ಕುಟುಂಬದ ಎಲ್ಲಾ ಸದಸ್ಯರು ಕಾರ್ಯಕ್ರಮಕ್ಕೆ ಬರಲಿದ್ದಾರೆ.
2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶವಿದೆ. ಸುದೀಪ್, ಯಶ್, ಗಣೇಶ್, ಉಪೇಂದ್ರ, ರವಿಚಂದ್ರನ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಕನ್ನಡದ ಎಲ್ಲಾ ಕಲಾವಿದರು ಭಾಗಿ ಆಗಲಿದ್ದಾರೆ. ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿಗೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಗೀತೆಯ ಮೂಲಕ ನಮನ ಕಾರ್ಯಕ್ರಮ ಆರಂಭ ಆಗಲಿದೆ. ವಿಜಯ್ ಪ್ರಕಾಶ್, ಗುರುಕಿರಣ್ ಹಾಗೂ ರಾಜೇಶ್ ಕೃಷ್ಣನ್ ಅವರಿಂದ ಗೀತ ನಮನ ನಡೆಯಲಿದೆ.
The post ಬೆಂಗಳೂರಲ್ಲಿ ಇಂದು ‘ಪುನೀತ್ ನಮನ’ -ಕಾರ್ಯಕ್ರಮಕ್ಕೆ ಯಾರೆಲ್ಲಾ ಬರ್ತಾರೆ ಗೊತ್ತಾ..? appeared first on News First Kannada.