ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗಲಿದೆ ಅಂತಾ ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.
ಇಂದು ಮತ್ತು ನಾಳೆ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರೊ ಮಳೆ ಹಿನ್ನೆಲೆ ಬೆಂಗಳೂರು ನಗರದ ಅಂಗನವಾಡಿ, ಸರ್ಕಾರಿ, ಖಾಸಗೀ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ನಿನ್ನೆ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇದರ ಪರಿಣಾಮ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.