ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಒಳಗಾಗಿರುವವರ ಸಂಖ್ಯೆ 20 ಸಾವಿರದ ಗಡಿ ದಾಟಿದೆ. ಇಂದು ಒಂದೇ ದಿನ 20,733 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಈವರೆಗೆ ಒಟ್ಟು 6,53,656 ಮಂದಿಗೆ ಸೋಂಕು ತಗುಲಿದಂತಾಗಿದೆ.

ಇಂದು 2,285 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 4,67,313. ಇಂದು ನಗರದಲ್ಲಿ 77 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 5,800 ಕ್ಕೆ ಏರಿಕೆಯಾಗಿದೆ.

The post ಬೆಂಗಳೂರಲ್ಲಿ ಒಂದೇ ದಿನ 20 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ appeared first on News First Kannada.

Source: News First Kannada
Read More