ಬೆಂಗಳೂರಲ್ಲಿ ಪಬ್ಲಿಕ್ ಟಾಯ್ಲೆಟ್​ಗಳ ಕೊರತೆ: BBMPಯಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರಲ್ಲಿ ಪಬ್ಲಿಕ್ ಟಾಯ್ಲೆಟ್​ಗಳ ಕೊರತೆ: BBMPಯಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು: ನಗರದಲ್ಲಿ ಅದರಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆಯನ್ನ ಪ್ರಶ್ನಿಸಿ ಲೆಟ್ಜ್ ಕಿಟ್ ಫೌಂಡೇಶನ್ ಪಿಐಎಲ್ ಸಲ್ಲಿಸಿದ್ದು, ಇಂದು ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು.

ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಜಾಸ್ತಿಯಾಗಿದೆ. ಪರಿಣಾಮ ನಗರದ ಸ್ವಚ್ಛತೆಗೆ ಮಾರಕವಾಗ್ತಿದೆ. ಕೆಲವೆಡೆ ಮುಜುಗರದ ಸಂಗತಿಗಳು ಕಂಡು ಬರ್ತಿವೆ ಎಂದು ಅರ್ಜಿದಾರರು ಆರೋಪಿಸಿದರು.

ಇದಕ್ಕೆ ಪೂರಕವಾಗಿ ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆಯ ಸರ್ವೆ ವರದಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಲಾಯ್ತು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಶೌಚಾಲಯಗಳು ಕಡಿಮೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ. ಸಾಮುದಾಯಿಕ ಶೌಚಾಲಯಗಳಲ್ಲಿ ಶುಚಿತ್ವದ ಕೊರತೆಯಿದೆ. ಈ ಕುರಿತು ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ಬಗ್ಗೆ ಸಂಸ್ಥೆ ಶಿಫಾರಸು ಮಾಡಿದೆ ಎನ್ನಲಾಗಿದೆ.

ಈ ಹಿನ್ನೆಲೆ ಬೆಂಗಳೂರಿಗೆ ಎಷ್ಟು ಶೌಚಾಲಯಗಳ ಅಗತ್ಯವಿದೆ? ಪ್ರತಿ ವಾರ್ಡ್​​ನಲ್ಲಿ ಎಷ್ಟು ಶೌಚಾಲಯಗಳ ಕೊರತೆಯಿದೆ? ಈ ಬಗ್ಗೆ ತಕ್ಷಣ ಮಾಹಿತಿ ನೀಡಿ ಎಂದು ಬಿಬಿಎಂಪಿಗೆ ಹೈಕೋರ್ಟ್ ಕೇಳಿದೆ. ಶೌಚಾಲಯಗಳ ನೈರ್ಮಲ್ಯಕ್ಕೆ ಗಮನ ನೀಡಬೇಕು. ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕೆಂದು ಬಿಬಿಎಂಪಿಗೆ ನಿರ್ದೇಶನ ನೀಡಿ ನ್ಯಾಯಪೀಠ ಅರ್ಜಿ ವಿಚಾರಣೆಯನ್ನ ಮುಂದೂಡಿತು.

 

The post ಬೆಂಗಳೂರಲ್ಲಿ ಪಬ್ಲಿಕ್ ಟಾಯ್ಲೆಟ್​ಗಳ ಕೊರತೆ: BBMPಯಿಂದ ಮಾಹಿತಿ ಕೇಳಿದ ಹೈಕೋರ್ಟ್ appeared first on News First Kannada.

Source: newsfirstlive.com

Source link