ಬೆಂಗಳೂರು: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪೈಶಾಚಿಕ ಕೃತ್ಯವೆಸಗಿದ್ದ ಪ್ರಕರಣ ಸಂಬಂಧ ಅರೆಸ್ಟ್​ ಆಗಿದ್ದ ನಾಲ್ವರ ಪೈಕಿ ಇಬ್ಬರು ಆರೋಪಿಗಳ ಮೇಲೆ ಇಂದು ಬೆಳಗ್ಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ರಿದಯ್ ಬಾಬು ಮತ್ತು ಸಾಗರ್ ಗುಂಡೇಟು ತಿಂದ ಆರೋಪಿಗಳು

ಇಂದು ಬೆಳಗ್ಗೆ ಸ್ಥಳ ಮಹಜರ್​​ಗೆ ಕರೆದೊಯ್ದಾಗ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದರು ಎನ್ನಲಾಗಿದೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದರು. ಆದ್ರೆ  ರಿದಯ್ ಬಾಬು ಮತ್ತು ಸಾಗರ್ ಪೊಲೀಸರ ಮೇಲೆ‌ ಹಲ್ಲೆ ಮಾಡಿದ್ದಾರೆ. ಹೀಗಾಗಿ ಆತ್ಮರಕ್ಷಣೆಗಾಗಿ ಇನ್ಸ್​​ಪೆಕ್ಟರ್ ಮಲ್ವಿನ್ ಹಾಗೂ ಸಬ್ ಇನ್ಸ್​ಪೆಕ್ಟರ್ ಅರವಿಂದ್ ಇಬ್ಬರು ಅರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?
ರಾಮಮೂರ್ತಿ ನಗರದ ಎನ್​ಆರ್​ಐ ಲೇಔಟ್​ನಲ್ಲಿ ಕಳೆದ 10 ದಿನಗಳ ಹಿಂದೆ 22 ವರ್ಷದ ಯುವತಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.  ಕಾಮುಕರು ಯುವತಿಗೆ ಚಿತ್ರಹಿಂಸೆ ನೀಡಿ ವಿಕೃತಿಮೆರೆದು ಚಿತ್ರೀಕರಿಸಿದ ವಿಡಿಯೋ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ನಾಲ್ವರು ಯುವಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಮೂಲದ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್​ನನ್ನು ಪೊಲೀಸರು ಬಂಧಿಸಿದ್ದು ಮತ್ತಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.

The post ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗ್ಯಾಂಗ್​​ರೇಪ್​ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್ appeared first on News First Kannada.

Source: newsfirstlive.com

Source link