ಬೆಂಗಳೂರು: ರಾಜ್ಯದಲ್ಲಿ ಇಂದು 9,713 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 10,3506 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,13, 219 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 31,531 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 22,03,462ಕ್ಕೆ ಏರಿಕೆಯಾಗಿದೆ.

ಇಂದು 36,475 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 15,81,457 ಮಂದಿ ಗುಣಮುಖರಾದಂತಾಗಿದೆ. ಇಂದು 403 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 21,837ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 6,00,147 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

ಇನ್ನು ಬೆಂಗಳೂರು ಒಂದರಲ್ಲೇ 8344 ಹೊಸ ಪ್ರಕರಣಗಳು ದಾಖಲಾಗಿ, 143 ಮಂದಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಇನ್ನು ಬಳ್ಳಾರಿಯಲ್ಲಿ 1729, ಬೆಳಗಾವಿ 1762, ದಕ್ಷಿಣ ಕನ್ನಡ 957, ಹಾಸನ 1182, ಮಂಡ್ಯ 1188, ಮೈಸೂರು 1811, ತುಮಕೂರು 2138 ಹಾಗೂ ಉಡುಪಿಯಲ್ಲಿ 745 ಹೊಸ ಹಾಗೂ ಉತ್ತರ ಕನ್ನಡದಲ್ಲಿ 1087 ಪ್ರಕರಣಗಳು ದಾಖಲಾಗಿವೆ.

The post ಬೆಂಗಳೂರಲ್ಲಿ 8,344 ಕೇಸ್​.. ರಾಜ್ಯದಲ್ಲಿ ಇಂದು 31,531 ಮಂದಿಗೆ ಪಾಸಿಟಿವ್ appeared first on News First Kannada.

Source: newsfirstlive.com

Source link