ಮುಂಬೈ: ಕೊರೊನಾ 2ನೇ ಅಲೆಯಿಂದಾಗಿ ಇಡೀ ದೇಶವೇ ತತ್ತರಿಸುತ್ತಿದೆ. ಆಸ್ಪತ್ರೆಗಳಲ್ಲಿ ಐಸಿಯೂ ಬೆಡ್, ಆಮ್ಲಜನಕಗಳ ಕೊರತೆಯಿಂದಾಗಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೇ ಬಾಲಿವುಡ್ ನಟ ಹಾಗೂ ಕರಾವಳಿಯ ಕುವರ ಸುನೀಲ್ ಶೆಟ್ಟಿ ಮುಂಬೈ ಹಾಗೂ ಬೆಂಗಳೂರಿನಲ್ಲಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ನೆರವಿಗೆ ಬಂದಿದ್ದಾರೆ.

ಬಾಲಿವುಡ್ ನಟಸುನೀಲ್ ಶೆಟ್ಟಿ ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ಬೆಂಗಳೂರಿಗರ ನೆರವಿಗೆ ಧಾವಿಸಿದ್ದಾರೆ. ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರಿಗೆ ಆಮ್ಲಜನಕದ ಕೊರತೆಯಿಂದಾಗಿ ತುಂಬಾ ತೊಂದರೆಯಾಗುತ್ತಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಬೆಂಗಳೂರಿಗರಿಗೆ ಉಚಿತವಾಗಿ ಆಮ್ಲಜಕ ಸಾಂದ್ರಕ ಯಂತ್ರಗಳನ್ನು ನೀಡಲು ಮುಂದಾಗಿದ್ದಾರೆ.

 

View this post on Instagram

 

A post shared by Suniel Shetty (@suniel.shetty)

ಮುಂಬೈ, ಬೆಂಗಳೂರಿನಲ್ಲಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ಆಮ್ಲಜನ ಸಿಲಿಂಡರ್‍ಗಳನ್ನು ನೀಡುತ್ತಿದ್ದಾರೆ. ಕೆವಿಎನ್ ಪ್ರತಿಷ್ಠಾನದ ಜೊತೆ ಸೇರಿ ಸುನೀಲ್ ಶೆಟ್ಟಿ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದಾರೆ. ಇದು ಕಷ್ಟದ ಸಮಯ ಯಾರಿಗಾದರೂ ಸಹಾಯ ಬೇಕಾದಲ್ಲಿ ಅಥವಾ ಸಹಾಯ ಮಾಡುವವರು ಇದ್ದರೆ ನಮ್ಮನ್ನು ಸಂಪರ್ಕಿಸಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಸುನೀಲ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

ಚಿತ್ರತಾರೆಯರು ಸೋಶಿಯಲ್ ಮೀಡಿಯಾದಲ್ಲಿ ಕೊರೊನಾ ಜಾಗೃತಿ ಮೂಡಿಸುವ ಮೂಲಕವಾಗಿ ಸಮಾಜಿಕ ಕಳಕಳಿಯನ್ನು ಮೆರೆಯುತ್ತಿದ್ದಾರೆ. ಜನಸಾಮಾನ್ಯರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಹಾಗೂ ಕೊರೊನಾದಿಂದ ಬಳಲುತ್ತಿರುವವರಿಗೆ ಕೈಲಾದಷ್ಟು ಆರ್ಥಿಕ ಸಹಾಯವನ್ನು ಮಾಡುತ್ತಿದ್ದಾರೆ.

The post ಬೆಂಗಳೂರಿಗರ ನೆರವಿಗೆ ಬಂದ ನಟ ಸುನೀಲ್ ಶೆಟ್ಟಿ appeared first on Public TV.

Source: publictv.in

Source link