ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 26,756 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಈವರೆಗೆ ಸಿಲಿಕಾನ್​ ಸಿಟಿಯಲ್ಲಿ ಸೋಂಕಿಗೊಳಗಾದವರ ಸಂಖ್ಯೆ 7,56,740ಕ್ಕೆ ಏರಿಕೆಯಾಗಿದೆ. ಇಂದು 5,123 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 4,91,306 ಕ್ಕೆ ಏರಿದೆ.

ಬೆಂಗಳೂರು ನಗರವೊಂದರಲ್ಲೇ ಇಂದು 93 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇನ್ನು ಈವರೆಗೆ 6,375 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 2,59,058 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್​ನಲ್ಲಿ ಹೇಳಿದೆ.

The post ಬೆಂಗಳೂರಿಗೆ ಕೊರೊನಾಘಾತ.. 24 ಗಂಟೆಗಳಲ್ಲಿ 26,756 ಮಂದಿಗೆ ಪಾಸಿಟಿವ್ appeared first on News First Kannada.

Source: newsfirstlive.com

Source link