ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು -ರೌಡಿಶೀಟರ್ ಬಬ್ಲಿ ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು -ರೌಡಿಶೀಟರ್ ಬಬ್ಲಿ ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಬೇಗೂರು ಕೆರೆ ಬಳಿ ನಡೆದಿದೆ. ರೌಡಿಶೀಟರ್​​ ಬಬ್ಲಿ ಕೊಲೆ ಆರೋಪಿಗಳಾದ ಪ್ರದೀಪ್ ಹಾಗೂ ರವಿ ಕಾಲಿಗೆ ಕೋರಮಂಗಲ ಠಾಣೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ.

ಆಡುಗೋಡಿ ಠಾಣೆ ರೌಡಿಶೀಟರ್ ಆಗಿದ್ದ ಬಬ್ಲಿಯನ್ನು ಜುಲೈ 19 ರಂದು ಕೋರಮಂಗಲ 8ನೇ ಬ್ಲಾಕ್ ನ ಯೂನಿಯನ್ ಬ್ಯಾಂಕ್ ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹಾಡಹಗಲೇ ಬ್ಯಾಂಕ್ ಒಳಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದ ಆರೋಪಿಗಳು ಆ ಬಳಿಕ ತಲೆ ಮರೆಸಿಕೊಂಡಿದ್ದರು.

ಆರೋಪಿಗಳ ಸುಳಿವು ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಬಂಧನ ಮಾಡಲು ಮುಂದಾದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದರು ಎನ್ನಲಾಗಿದ್ದು, ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಕೋರಮಂಗಲ ಠಾಣೆ ಇನ್ಸ್ ಪೆಕ್ಟರ್ ರವಿ ಹಾಗೂ ಸಬ್ ಇನ್ಸ್ ಪೆಕ್ಟರ್ ಸಿದ್ದಪ್ಪ ಅವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಮತ್ತೆ ಝಳಪಿಸಿದ ಮಚ್ಚು, ಲಾಂಗ್; ಬ್ಯಾಂಕ್​ನಲ್ಲೇ ನಡೀತು ರೌಡಿಶೀಟರ್​ ಹತ್ಯೆ

The post ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು -ರೌಡಿಶೀಟರ್ ಬಬ್ಲಿ ಕೊಲೆ ಆರೋಪಿಗಳ ಮೇಲೆ ಫೈರಿಂಗ್ appeared first on News First Kannada.

Source: newsfirstlive.com

Source link