ಬೆಂಗಳೂರಿನಿಂದ ಹೊಸಪೇಟೆಗೆ ಹೋಗುತ್ತಿದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ: ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ದುರ್ಮರಣ | Innova car accident at jagalur taluk in davanagere 6 in the car died on the spot


ಬೆಂಗಳೂರಿನಿಂದ ಹೊಸಪೇಟೆಗೆ ಹೋಗುತ್ತಿದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ: ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ದುರ್ಮರಣ

ಡಿವೈಡರ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ ರಸ್ತೆ ಭೀಕರ ದುರಂತ: 7 ಜನರ ಸಾವು, ಕಾರಿನಲ್ಲಿದ್ದ6 ಜನ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಅಸುನೀಗಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಭೀಕರ ದುರಂತ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿಗಳು. ಬೆಂಗಳೂರಿನಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದಾವಣಗೆರೆ ಎಸ್‌ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

TV9 Kannada


Leave a Reply

Your email address will not be published. Required fields are marked *