ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗಿದೆ. ಅದರಲ್ಲೂ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿದೆ. ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 12 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನು ಆನೇಕಲ್ ತಾಲೂಕಿನ ದೊಮ್ಮಸಂದ್ರದ ದಿ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ 47 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ಇದೇ ಸ್ಕೂಲ್ನಲ್ಲಿ 33 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿತ್ತು. ಆದರೆ ಇಂದು (ನವೆಂಬರ್ 27) ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಸುಕ್ರುತ ಕಾಲೇಜಿನಲ್ಲಿ 17 ಜನರಿಗೆ ಸೋಂಕು ದೃಢಪಟ್ಟಿದೆ.
ದಿ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಮೊದಲು ಇಬ್ಬರು ವಿದ್ಯಾರ್ಥಿಗಳಿಗೆ ಜ್ವರ, ನೆಗಡಿ ಪತ್ತೆಯಾಗಿತ್ತು. ಈ ಇಬ್ಬರು ವಿದ್ಯಾರ್ಥಿಗಳು ನಾಗಪುರದವರಾಗಿದ್ದಾರೆ. ನಂತರ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ಧೃಡವಾಗಿದೆ. ಬಳಿಕ ಇದೇ ಸ್ಕೂಲ್ನ 400ಕ್ಕೂ ಅಧಿಕ ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಮೊದಲು 33 ಜನರಿಗೆ ಸೋಂಕು ಧೃಡವಾಗಿತ್ತು. ಈಗ ಈಗ ಸೋಂಕಿತರ ಸಂಖ್ಯೆ 47 ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:
Coronavirus: ಧಾರವಾಡದ ಎಸ್ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ