
ಹೊತ್ತಿ ಉರಿಯುತ್ತಿರುವ ಕಾರು
ಯಶವಂತ್ ಮತ್ತು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವ ಯುವ ಜೋಡಿ. ಇವರು ಬೆಂಗಳೂರಿನ ಆರ್.ಟಿ.ನಗರದವರು ಎಂದು ತಿಳಿದುಬಂದಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರು ಪತ್ತೆಯಾಗಿದೆ.
ಉಡುಪಿ: ಕಾರಿನೊಳಗೆ ಪೆಟ್ರೋಲ್ (Petrol) ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸಂಭವಿಸಿದೆ. ಯಶವಂತ್ ಮತ್ತು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವ ಯುವ ಜೋಡಿ. ಇವರು ಬೆಂಗಳೂರಿನ ಆರ್.ಟಿ.ನಗರದವರು ಎಂದು ತಿಳಿದುಬಂದಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರು ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಮೃತರು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.