ಬೆಂಗಳೂರು: ಮಾಜಿ ಕಾರ್ಪೊರೇಟರ್ ಆತ್ಮಹತ್ಯೆ ಶರಣಾಗಿರುವ ಘಟನೆ ಅತ್ತಿಗುಪ್ಪೆಯಲ್ಲಿ ನಡೆದಿದೆ. 55 ವರ್ಷದ ಶಿವಪ್ಪ ಆತ್ಮಹತ್ಯೆ ಶರಣಾದ ಮಾಜಿ ಕಾರ್ಪೊರೇಟರ್ ಆಗಿದ್ದಾರೆ.
ಅತ್ತಿಗುಪ್ಪೆಯ ನಿವಾಸದಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಶಿವಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತರ ಪುತ್ರ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಸಮೀಪದ ಗುರುಶ್ರೀ ಆಸ್ಪತ್ರೆಗೆ ದಾಖಲಿಸಿದರು ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಜನತಾದಳದಿಂದ ರಾಜಕೀಯ ಜೀವನ ಪ್ರಾರಂಭಿಸಿದ್ದ ಶಿವಪ್ಪ, 2005ರಲ್ಲಿ ಕಾಂಗ್ರೆಸ್ ನಿಂದ ಅತ್ತಿಗುಪ್ಪೆ ವಾರ್ಡ್ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಆ ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ರು. ಬಳಿಕ ಬಿಡಿಎ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಶಿವಪ್ಪ ಅಲ್ಲದೇ ಅವರ ಪತ್ನಿ ಕೂಡ ಕಾರ್ಪೊರೇಟರ್ ಅಗಿದ್ದರು. ಅಲ್ಲದೇ ಶಿವಪ್ಪ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಚಂದ್ರಾಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
The post ಬೆಂಗಳೂರು: ನೇಣಿಗೆ ಕೊರಳೊಡ್ಡಿ ಮಾಜಿ ಕಾರ್ಪೊರೇಟರ್ ಆತ್ಮಹತ್ಯೆಗೆ ಶರಣು appeared first on News First Kannada.