ಬೆಂಗಳೂರು ರೌಡಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್​; 1000ಕ್ಕೂ ಹೆಚ್ಚು ಮನೆಗಳ ಮೇಲೆ ದಾಳಿ

ಬೆಂಗಳೂರು ರೌಡಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್​; 1000ಕ್ಕೂ ಹೆಚ್ಚು ಮನೆಗಳ ಮೇಲೆ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ಸ್​ಗೆ ಬೆಂಗಳೂರು ಪೊಲೀಸರು ಶಾಕ್ ನೀಡಿದ್ದಾರೆ. ನಗರದ ವಿವಿಧ ಭಾಗಗಳಲ್ಲಿರುವ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ನಗರದ 8 ವಲಯಗಳ ಪೊಲೀಸರು ಏಕಕಾಲಕ್ಕೆ ವಿವಿಧೆಡೆ ಕಾರ್ಯಾಚರಣೆಗೆ ಇಳಿದು, ಹಲವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಬರೋಬ್ಬರಿ ಸಾವಿರಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಲಾಕ್​ಡೌನ್ ತೆರವುಗೊಂಡ ಬಳಿಕ ರೌಡಿಸಂ ಚಟುವಟಿಕೆಗಳು ಹೆಚ್ಚಾಗಿರುವ ಬಗ್ಗೆ ದೂರುಗಳು ಬಂದಿದ್ದವು.

 

152 ರೌಡಿಗಳು ಪೊಲೀಸರ ವಶಕ್ಕೆ
ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಇತ್ಯಾದಿ ಕಾರಣಗಳಿಗೆ ರೌಡಿಸಂ ಮಾಡಿರುವ ಬಗ್ಗೆ ದೂರು ಬಂದಿದ್ದವು. ತನಿಖೆ ವೇಳೆ ಕೆಲವರು ಜೈಲಿನಿಂದಲೇ ಕುಳಿತು ರೌಡಿಸಂ ಮಾಡುತ್ತಿರುವ ಬಗ್ಗೆಯೂ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಆಯುಕ್ತರು, ಡಿಸಿಪಿಗಳೊಂದಿಗೆ ಕಮಿಷನರ್ ಕಮಲ್ ಪಂತ್ ಸಭೆ ನಡೆಸಿದ್ದರು. ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ಸೂಚಿಸಿದ್ದರು. ಅದರಂತೆ ಆಯಾ ವ್ಯಾಪ್ತಿಯಲ್ಲಿ ರೌಡಿ ಆಸಾಮಿಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

 

ಈವರೆಗೆ ಉತ್ತರ ವಿಭಾಗದ 292 ರೌಡಿಗಳು ಹಾಗೂ ಸಹಚರರ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಒಟ್ಟು 152 ರೌಡಿಗಳು ಪೊಲೀಸರ ವಶಕ್ಕೆ ಪಡೆಯಲಾಗಿದೆ. ಉತ್ತರ ವಿಭಾಗದಲ್ಲಿ ಪೊಲೀಸರ ದಾಳಿ ಮುಂದುವರಿದಿದ್ದು, ಮಧ್ಯಾಹ್ನದವರೆಗೂ ದಾಳಿ ಮುಂದುವರೆಯುವ ಸಾಧ್ಯತೆ ಇದೆ. ರಮೇಶ್ ಅಲಿಯಾಸ್ ಕುಳ್ಳಿ, ಆನಂದ, ಅರುಣ್, ಶ್ರೀಕಾಂತ ಮನೆ ಸೇರಿದಂತೆ ಹಲವು ರೌಡಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ.

 

The post ಬೆಂಗಳೂರು ರೌಡಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್​; 1000ಕ್ಕೂ ಹೆಚ್ಚು ಮನೆಗಳ ಮೇಲೆ ದಾಳಿ appeared first on News First Kannada.

Source: newsfirstlive.com

Source link