ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನು ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ನಾಳೆಯಿಂದ ಮಳೆಯ ಪ್ರಮಾಣ ತಗ್ಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗು ಕರಾವಳಿ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಎಲ್ಲೋ ಅಲರ್ಟ್ ಅನೌನ್ಸ್ ಮಾಡಲಾಗಿದೆ.
ಇಂದು ಕೂಡ ಎರಡು ಗಂಟೆಗೂ ಅಧಿಕ ಕಾಲ ಬೆಂಗಳೂರಿನಲ್ಲಿ ಮಳೆಯಾಗಿದ್ದು. ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿದು ಬರುವ ದೃಶ್ಯ ಕಂಡು ಬಂತು. ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ರಾಜಾಜಿ ನಗರ, ಮತ್ತಿಕೆರೆ, ಯಶವಂತಪುರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಇನ್ನು ಮಳೆಗೆ ರಸ್ತೆಗಳು ಕೊಚ್ಚಿ ಹೋಗಿವೆ.
ಇದನ್ನೂ ಓದಿ: ಅಕಾಲಿಕ ಮಳೆಗೆ ಚಿತ್ರದುರ್ಗದಲ್ಲಿ 6 ಮಂದಿ ಸಾವು -ಎಷ್ಟೆ ಹಿಡಿದ್ರೂ ಕೊಚ್ಚಿ ಹೋಗೆ ಬಿಡ್ತು ಬೈಕ್
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ, ಬೆಳ್ತಂಗಡಿ, ಪುತ್ತೂರು ತಾಲೂಕಿನ ಹಲವೆಡೆ ಎಡೆಬಿಡದೇ ಸುರಿದಿದ್ದು, ಕೃಷಿ ಭೂಮಿ ಮತ್ತು ತೋಟಗಳಿಗೆ ಮಳೆ ನೀರು ನುಗ್ಗಿದ್ದರಿಂದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದೇ ರೀತಿ ಮುಂದಿನ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.