ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ರೋಗಕ್ಕೆ ತುತ್ತಾಗುತ್ತಿರುವ ರೋಗಿಗಳ ಚಿಕಿತ್ಸೆ ಸರ್ಕಾರ ಮುಂದಾಗಿದ್ದು, ಸೋಂಕಿನಿಂದ ಗುಣಮುಖರಾದ ಮೇಲೆ ಬ್ಲ್ಯಾಕ್ ಫಂಗಸ್ ದೃಢವಾದರೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಮುಂದಾಗಿದೆ.

ನಗರದ ವಿಕ್ಟೋರಿಯಾ, ಮಿಂಟೋ, ನೆಪ್ರೋಯೂರಾಲಜಿ, ಟ್ರಾಮಾಕೇರ್ ಹಾಗೂ ಪಿಎಂಎಸ್​​​​ಎಸ್​​ವೈ ಆಸ್ಪತ್ರೆಯಲ್ಲಿ ಬ್ಲ್ಯಾಕ್​​ ಫಂಗಸ್​ ಚಿಕಿತ್ಸೆ ನೀಡಲು ಸರ್ಕಾರ ಸೂಚಿಸಿದ್ದು, ಡಾ.ಹೆಚ್​​​.ಎಸ್​​.ಸತೀಶ್ ಅಧ್ಯಕ್ಷತೆಯಲ್ಲಿ ಚಿಕಿತ್ಸೆ ವಿಧಾನ ಫಿಕ್ಸ್ ಮಾಡಿದೆ.

ಅಲ್ಲದೇ ಬೆಂಗಳೂರು ಹೊರತುಪಡಿಸಿ ರಾಜ್ಯದ 6 ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸರ್ಕಾರದ ನಿರ್ಧರಿಸಿದೆ. ಇದರಂತೆ ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆ (BMCRI), ಮೈಸೂರು ಮೆಡಿಕಲ್ ಕಾಲೇಜು, ಹುಬ್ಬಳ್ಳಿಯ ಕಿಮ್ಸ್, ಗುಲ್ಬರ್ಗಾ ಮೆಡಿಕಲ್ ಕಾಲೇಜು ಆಸ್ಪತ್ರೆ, ಶಿವಮೊಗ್ಗ ಮೆಡಿಕಲ್ ಕಾಲೇಜು, ಮಂಗಳೂರಿನ ವೆನ್ಲಾಕ್‌ನಲ್ಲಿ ಬ್ಲಾಕ್‌ ಫಂಗಸ್‌ಗೆ ಚಿಕಿತ್ಸೆ ನೀಡಲು ತಿಳಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಬ್ಲ್ಯಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡಲು ಆದೇಶ ನೀಡಿದ್ದು, ಚಿಕಿತ್ಸಾ ಸಾಮರ್ಥ್ಯ ಹೊಂದಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ KPME ಕಾಯ್ದೆ ಸೆಕ್ಷನ್ 7ಬಿ ಅಡಿಯಲ್ಲಿಯೂ ಪರಿಗಣನೆ ಮಾಡಿ ಎಲ್ಲಾ ಆಸ್ಪತ್ರೆಗಳು ರೋಗಿಗಳ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದೆ.

The post ಬೆಂಗಳೂರು ಹೊರತುಪಡಿಸಿ ರಾಜ್ಯದ 6 ಸರ್ಕಾರಿ ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್​ಗೆ ಚಿಕಿತ್ಸೆಗೆ ಸೂಚನೆ appeared first on News First Kannada.

Source: newsfirstlive.com

Source link