ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕೆಪಿಸಿಸಿ ನಿಯೋಗ ತೆರಳಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಸತೀಶ್ ರೆಡ್ಡಿ ಮತ್ತು ಬೆಂಬಲಿಗರ ವಿರುದ್ದ ದೂರು ನೀಡಿದೆ.

ಕೊರೊನಾ ಬೆಡ್ ದಂಧೆ ಪ್ರಕರಣದಲ್ಲಿ ಕೋಮು ಬಣ್ಣ ಹಚ್ಚಿದ್ದಾರೆ ಎಂದು ಆರೋಪಿಸಿರುವ ಕೈ ನಿಯೋಗ.. ಐಎಎಸ್ ಅಧಿಕಾರಿ ವಿರುದ್ದ ಶಾಸಕ ಸತೀಶ್ ರೆಡ್ಡಿ ಮತ್ತು ಬೆಂಬಲಿಗರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಆರೋಪಿಸಿ.. ಬೆಡ್ ದಂಧೆಯಲ್ಲಿ ಅಕ್ರಮ ನಡೆಸಿರುವ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಶಾಸಕ ಕೃಷ್ಣಬೈರೇಗೌಡ, ಜಮೀರ್ ಅಹ್ಮದ್, ಹ್ಯಾರಿಸ್, ಸಲೀಂ ಅಹ್ಮದ್ ಸೇರಿದಂತೆ ಹಲವು ಮುಖಂಡರ ನಿಯೋಗ ದೂರು ನೀಡಿದೆ.

The post ಬೆಡ್​ ಬ್ಲಾಕಿಂಗ್ ಪ್ರಕರಣ; ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ನಿಯೋಗ ದೂರು appeared first on News First Kannada.

Source: newsfirstlive.com

Source link