ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯದ ಕೋವಿಡ್ ವಾರ್ ರೂಮ್​ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನಲಾಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ ನೇತ್ರಾ, ರೋಹಿತ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬಂಧಿತ ಆರೋಪಿಗಳು ಸೋಂಕಿತರಿಗೆ ಮೂರು ಬೆಡ್​ ಕೊಡಿಸಿ ಹಣ ವಸೂಲಿ ಮಾಡಿಕೊಂಡಿದ್ದು, ಒಟ್ಟು ಮೂರು ಬೆಡ್​ಗಳಿಗೆ ಸುಮಾರು 1 ಲಕ್ಷದ 7 ಸಾವಿರ ರೂಪಾಯಿ ವಸೂಲಿ ಮಾಡಿದ್ದಾರೆ. ಎರಡು ಬೆಡ್​ಗಳನ್ನು ತಲಾ 40 ಸಾವಿರ ರೂಪಾಯಿ, ಮತ್ತೊಂದು ಬೆಡ್​​ಗೆ 27 ಸಾವಿರ ರೂಪಾಯಿ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಮಾಹಿತಿ ಪಡೆದು ಜಯನಗರ ಇನ್ಸ್ ಪೆಕ್ಟರ್ ಸುದರ್ಶನ್ ಕಾರ್ಯಾಚರಣೆ ಮಾಡಿದ್ದಾರೆ. ಸದ್ಯ ಪ್ರಕರಣ ವಿಚಾರಣೆ ಮುಂದುವರಿದಿದೆ.

ಇತ್ತ ಸಂಸದ ತೇಜಸ್ವಿ ಸೂರ್ಯ ಅವರು ವಾರ್ ರೂಮ್ ನಲ್ಲೂ ಅವ್ಯವಹಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಖುದ್ದು ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ವಾರ್ ರೂಂ ಮೇಲ್ವಿಚಾರಕರಿಂದ ಜಯನಗರ ಠಾಣೆಗೆ ದೂರು ನೀಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆಗೆ ಮುಂದಾದ ಜಯನಗರ ಪೊಲೀಸರು ಬಳಿಕ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

The post ಬೆಡ್ ಬ್ಲಾಕಿಂಗ್ ದಂಧೆ; ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ ಜಯನಗರ ಪೊಲೀಸರು appeared first on News First Kannada.

Source: newsfirstlive.com

Source link