ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ಬಿಜೆಪಿ ಶಕ್ತಿ ಪ್ರದರ್ಶನ, ಜನಸಂಕಲ್ಪ ಸಮಾವೇಶಕ್ಕೆ ಸಿದ್ಧವಾಯ್ತು ಬೃಹತ್ ವೇದಿಕೆ – cm basavaraj bommai to visit davanagere on nov 23rd over BJP Jana sankalpa yatra


ಇಂದು ಜಗಳೂರಿನ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಜನ ಸಂಕಲ್ಪ ಕಾರ್ಯಕ್ರಮಕ್ಕೆ 35 ಸಾವಿರ ಜನ ಕೂರಲು ಬೇಕಾಗುವಂತಹ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.

ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ಬಿಜೆಪಿ ಶಕ್ತಿ ಪ್ರದರ್ಶನ, ಜನಸಂಕಲ್ಪ ಸಮಾವೇಶಕ್ಕೆ ಸಿದ್ಧವಾಯ್ತು ಬೃಹತ್ ವೇದಿಕೆ

ಸಾಂದರ್ಭಿಕ ಚಿತ್ರ

ದಾವಣಗೆರೆ: ಬಿಜೆಪಿಯ(BJP Karnataka) ಭದ್ರಕೋಟೆ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯ ಜಗಳೂರು & ಹರಿಹರದಲ್ಲಿ ಇಂದು ಬಿಜೆಪಿ ಸಂಕಲ್ಪ ಯಾತ್ರೆ(Jana Sankalpa Yatra) ಕೈಗೊಂಡಿದೆ. ಇಂದು ಬೆಳಿಗ್ಗೆ 11.15ಕ್ಕೆ ಜಗಳೂರಲ್ಲಿ ಜನ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಧ್ಯಾಹ್ನ 2.30ಕ್ಕೆ ಹರಿಹರದಲ್ಲಿ ಜನ ಸಂಕಲ್ಪ ಸಭೆ ಇರಲಿದೆ. ಯಾತ್ರೆಯಲ್ಲಿ ಸಿಎಂ ಬಸವರಾಜ್​ ಬೊಮ್ಮಾಯಿ(Basavaraj Bommai), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ಸೇರಿದಂತೆ ಪಕ್ಷದ ಹಿರಿಯ‌ ಮುಖಂಡರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮಕ್ಕೆ ಸಿದ್ಧವಾದ ಬೃಹತ್ ವೇದಿಕೆ

ಇಂದು ಜಗಳೂರಿನ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಜನ ಸಂಕಲ್ಪ ಕಾರ್ಯಕ್ರಮಕ್ಕೆ 35 ಸಾವಿರ ಜನ ಕೂರಲು ಬೇಕಾಗುವಂತಹ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಿಎಂ ಸಿದ್ದೇಶ್ವರ, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

TV9 Kannada


Leave a Reply

Your email address will not be published.