ಬೆಳಗಾವಿ: ರೈಲು ಹಳಿಗೆ ತಲೆ ಕೊಟ್ಟು ಪ್ರತ್ಯೇಕ ಸ್ಥಳಗಳಲ್ಲಿ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಒಂದೇ ದಿನ ಮೂವರು ರೈಲು ಹಳಿಗೆ ತಲೆಕೊಟ್ಟು ಸಾವನ್ನಪ್ಪಿರೋದು ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ.

ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಅಶೋಕ ಈರಪ್ಪ ಕಟ್ಟಿಮನಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮದ್ಯದ ನಶೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಬೆಳಗಾವಿ ನಗರದ ಸಮರ್ಥ ನಗರದ ಬಳಿ ಸುಮಾರು 60 ವರ್ಷದ ವ್ಯಕ್ತಿಯೊಬ್ಬ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಈತನ ಗುರುತು ಇನ್ನೂ ಪತ್ತೆಯಾಗಿಲ್ಲ.

ಇನ್ನು ಚಿಕ್ಕೋಡಿ ರೋಡ್​ ರೈಲು ನಿಲ್ದಾಣದ ಬಳಿ ಮತ್ತೊಬ್ಬ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನಿಗೆ ಸುಮಾರು 55 ವರ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಇವನ ಗುರುತು ಕೂಡ ಪತ್ತೆಯಾಗಿಲ್ಲ.

The post ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ, ಒಂದೇ ದಿನ ಮೂವರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ appeared first on News First Kannada.

Source: newsfirstlive.com

Source link