ಬೆಳಗಾವಿ: ತಾಲೂಕಿನ ವಂಟಮೂರಿ ಘಾಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂರೂ ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಚಾಲಕರಾದ ನೀರಜ್ (32), ರಾಜೇಂದ್ರ (38) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೂರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ.. ಇಬ್ಬರು ಸ್ಥಳದಲ್ಲೇ ದುರ್ಮರಣ appeared first on News First Kannada.

Source: newsfirstlive.com

Source link