ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ವರುಣನ ಅಬ್ಬರ ಮುಂದುವರೆದಿದ್ದು, ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಈ ನಡುವೆ ಬಳ್ಳಾರಿ ನಾಲಾ ಬಳಿ ಮಾರ್ಕಂಡೇಯ ನದಿಯಲ್ಲಿ ರೈತರೊಬ್ಬರು ಕೊಚ್ಚಿ ಹೋದ ಘಟನೆ ಸಂಭವಿಸಿದೆ.

ಕಾಕತಿ‌ ಗ್ರಾಮದ ಸಿದ್ರಾಯಿ ಸುತಗಟ್ಟಿ (65) ನೀರಿನಲ್ಲಿ ಕೊಚ್ಚಿ ಹೋದರ ರೈತ. ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ರೈತನ ಚಪ್ಪಲಿಗಳು ನದಿ ತೀರದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಕೈ ಕಾಲು ತೊಳೆದುಕೊಳ್ಳಲು ಹೋದಾಗ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಚ್ಚಿ ಹೋದ ರೈತನ ಪತ್ತೆಯಾಗಿ ಅಗ್ನಿಶಾಮಕದಳ ಹಾಗೂ ಕಾಕತಿ ಪೋಲಿಸರಿಂದ ಶೋಧ ಕಾರ್ಯ ಮುಂದುವರಿದಿದೆ.

ಇನ್ನೂ ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ಜಲಾಶಯಕ್ಕೆ‌ ಒಳ ಹರಿವು ಹೆಚ್ಚಳವಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮ ಬಳ್ಳಾರಿ ನಾಲಾ ಉಕ್ಕಿ ಹರಿಯುತ್ತಿದ್ದು, ಸಾವಿರಾರರು ಎಕರೆ ಬೆಳೆ ನೀರಿನಲ್ಲಿ ಮುಳುಗಿ ಹೋಗಿದೆ.

The post ಬೆಳಗಾವಿಯಲ್ಲಿ ಮಳೆ ಅಬ್ಬರ- ಮಾರ್ಕಂಡೇಯ ನದಿಯಲ್ಲಿ ಕೊಚ್ಚಿಹೋದ ರೈತ appeared first on News First Kannada.

Source: newsfirstlive.com

Source link