ಬೆಳಗಾವಿಯಲ್ಲಿ ರೈತರ ಪ್ರತಿಭಟನೆ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ


ಬೆಳಗಾವಿ: ಹಲಗಾ-ಮಚ್ಚೆ ನಡುವಿನ ಬೈಪಾಸ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಜಮೀನಿನ ಮಾಲೀಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಹಲಗಾ- ಮಚ್ಚೆ ಬಳಿ ರಸ್ತೆ ಕಾಮಗಾರಿಗೆ ರೈತರ ವಿರೋಧವಿದ್ದು ಫಲವತ್ತಾದ ಭೂಮಿ ಬಿಟ್ಟು ಕೊಡುವುದಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೈತರ ವಿರುದ್ಧದ ನಡುವೆಯೂ ಪೋಲಿಸ್ ಭದ್ರತೆಯೊಂದಿಗೆ ಆಗಮಿಸಿದ ಅಧಿಕಾರಿಗಳು ಕಾಮಗಾರಿ ಆರಂಭಿಸಲು ಸೂಚಿಸಿದ್ದಾರೆ.

ಇದರಿಂದ ಕೆರಳಿದ ಜಮೀನಿನ ಮಾಲೀಕರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಸದ್ಯ ಮಾಲೀಕನನ್ನು ಆಸ್ಪತ್ರೆಗೆ ದಾಕಲಿಸಲಾಗಿದೆ

News First Live Kannada


Leave a Reply

Your email address will not be published.