ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ವಿರುದ್ಧ ವಾರಂಟ್ ಜಾರಿಗೊಳಿಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ | Bengaluru court issues warrant against Belagavi north mla anil benake

ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ವಿರುದ್ಧ ವಾರಂಟ್ ಜಾರಿಗೊಳಿಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ

ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ

2018ರ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆ ಶಾಸಕ ಅನಿಲ್ ಬೆನಕೆ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿತ್ತು. ಜೂನ್ 27ರಂದು ಶಾಸಕರನ್ನು ಹಾಜರುಪಡಿಸುವಂತೆ ವಾರಂಟ್ ಜಾರಿಗೊಳಿಸಲಾಗಿದೆ.

TV9kannada Web Team

| Edited By: Ayesha Banu

May 31, 2022 | 8:41 PM
ಬೆಂಗಳೂರು: ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. 5 ಬಾರಿ ವಾರಂಟ್ ಜಾರಿಗೊಳಿಸಿದರೂ ಹಾಜರುಪಡಿಸದ ಹಿನ್ನೆಲೆ 42ನೇ ಎಸಿಎಂಎಂ ಕೋರ್ಟ್ ನ್ಯಾ.ಜೆ.ಪ್ರೀತ್ ಅಸಮಾಧಾನಗೊಂಡಿದ್ದಾರೆ. ಹಾಗೂ ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರಿಗೆ ವಾರಂಟ್ ಜಾರಿ ವೈಫಲ್ಯಕ್ಕೆ ಕಾರಣ ತಿಳಿಸುವಂತೆ ನೋಟಿಸ್ ನೀಡಲಾಗಿದೆ.

2018ರ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆ ಶಾಸಕ ಅನಿಲ್ ಬೆನಕೆ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿತ್ತು. ಜೂನ್ 27ರಂದು ಶಾಸಕರನ್ನು ಹಾಜರುಪಡಿಸುವಂತೆ ವಾರಂಟ್ ಜಾರಿಗೊಳಿಸಲಾಗಿದೆ.

TV9 Kannada

Leave a Reply

Your email address will not be published. Required fields are marked *