ಬೆಳಗಾವಿ ಮನೆ ಕುಸಿದು 7 ಮಂದಿ ಸಾವು -₹2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಬೆಳಗಾವಿ: ಮನೆ ಕುಸಿದು ಒಂದೇ ಕುಟುಂಬದ 6 ಮಂದಿ ಹಾಗೂ ಬಾಲಕಿ ಸಾವನ್ನಪ್ಪಿದ ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ದುರಂತರದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ದುರ್ಘಟನೆ ಕುರಿತಂತೆ ಪ್ರಧಾನಿ ಮೋದಿ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದ್ದು, ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದುಃಖಕರ ಸಂಗತಿಯಾಗಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೊಂದಿಗೆ ನಾವಿದ್ದೇವೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಮ್ಮವರನ್ನು ಕಳೆದುಕೊಂಡ ಕುಟುಂಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು.. ಕುಟುಂಬಕ್ಕೆ ಸಾಂತ್ವನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಂತಾಪ ಸೂಚಿಸಿದ್ದ ಸಿಎಂ ಬೊಮ್ಮಾಯಿ ಅವರು, ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಮಾಡಿದ್ದರು.

News First Live Kannada

Leave a comment

Your email address will not be published. Required fields are marked *