ಬೆಂಗಳೂರು: ಕನ್ನಡದ ಹಿರಿಯ ನಟ ಶಿವರಾಮ್ ಅಂತ್ಯ ಸಂಸ್ಕಾರ ಇಂದು ಬೆಳಗ್ಗೆ 11 ಗಂಟೆಗೆ ನೆರವೇರಲಿದೆ.
ಆದ್ರೆ ಅದಕ್ಕೂ ಮುನ್ನ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಅಭಿಮಾನಿಗಳಿಗಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯವರೆಗೂ ಅಭಿಮಾನಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಂತರ ಬೆಳಗ್ಗೆ 11 ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಪೊಲೀಸ್ ಗೌರವಗಳೊಂದಿಗೆ ಅಂತಿಮ ವಿಧಿವಿಧಾನ ನೆರವೇರಲಿದೆ.
ಬಿದ್ದು ತಲೆಗೆ ಗಂಭೀರವಾಗಿ ಗಾಯಮಾಡಿಕೊಂಡಿದ್ದ ಶಿವರಾಮ್ ಅವರನ್ನ ನಗರದ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ವಿಧಿವಶರಾಗಿದ್ದಾರೆ.