ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಲಿಕಾನ್ ಸಿಟಿ ಜನರಿಗೆ ಶಾಕ್ ನೀಡಿದೆ. ಶಿಕಾರಿಪಾಳ್ಯ ಮತ್ತು ಎಲೆಕ್ಟ್ರಾನಿಕ್ ಸಿಟಿ ಮಧ್ಯ ಭಾಗದಲ್ಲಿರುವ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಖಾಲಿ ಜಾಗದಲ್ಲಿ ಇಂದು ಬೆಳಗ್ಗೆ ಚಿರತೆ ಕಾಣಿಸಿಕೊಂಡಿದೆ.

ಆಹಾರವನ್ನರಸಿ ಸಮೀಪದ ಬನ್ನೇರುಘಟ್ಟ ಅರಣ್ಯದಿಂದ ಚಿರತೆ ಬಂದಿರುವ ಸಾಧ್ಯತೆ ಇದೆ. ಚಿರತೆಯ ಚಲನವಲನ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಕರಡಿ ಕಾಣಿಸಿಕೊಂಡಿತ್ತು. ಇದೀಗ ಚಿರತೆ ಪ್ರತ್ಯಕ್ಷವಾಗುವ ಮೂಲಕ ಜನರಲ್ಲಿ ಆತಂಕ ಹೆಚ್ಚಾಗಿದೆ. ಚಿರತೆಗಾಗಿ ಅರಣ್ಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

The post ಬೆಳ್ಳಂಬೆಳಗ್ಗೆ ಬೆಂಗಳೂರಿಗರಿಗೆ ಶಾಕ್: ಎಲೆಕ್ಟ್ರಾನಿಕ್ ಸಿಟಿ ಬಳಿ ಚಿರತೆ ಪ್ರತ್ಯಕ್ಷ appeared first on News First Kannada.

Source: newsfirstlive.com

Source link