ಬೆಳ್ಳಂ‌ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ -ರಾಜ್ಯದ 60 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ

ಬೆಂಗಳೂರು: ಬೆಳ್ಳಂ‌ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ಕೊಟ್ಟಿದ್ದು, ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.

ರಾಜ್ಯದ 60 ಕಡೆ ಏಕಕಾಲಕ್ಕೆ 100 ಅಧಿಕಾರಿಗಳ, 300 ಜನ ಸಿಬ್ಬಂದಿಯಿಂದ ದಾಳಿ ನಡೆದಿದ್ದು, 8 ಜನ ಎಸಿಬಿ ಎಸ್​​ಪಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ರಾಜ್ಯದ ಮಂಗಳೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ಬೆಳಗಾವಿ, ಬಳ್ಳಾರಿ, ಕಲಬುರಗಿ ಜಿಲ್ಲೆ ಸೇರಿ ರಾಜ್ಯದ 8 ಜಿಲ್ಲೆಯ 60 ವಿವಿದೆಡೆ ಎಸಿಬಿ ದಾಳಿ ಜರುಗಿದೆ.

ಎಸಿಬಿ ದಾಳಿ ತುತ್ತಾದ ಸರ್ಕಾರಿ ಅಧಿಕಾರಿಗಳು..

01.ಕೆ.ಎಸ್ ಲಿಂಗೇಗೌಡ, ಎಕ್ಸಿಕ್ಯೂಟಿವ್ ಎಂಜಿನಿಯರ್.. ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರು.
02. ಶ್ರೀನಿವಾಸ್ ಕೆ, ಎಕ್ಸಿಕ್ಯೂಟಿವ್ ಎಂಜಿನಿಯರ್.. ಹೆಚ್.ಎಲ್.ಬಿ.ಸಿ ಮಂಡ್ಯ..
03. ಲಕ್ಷ್ಮಿಕಾಂತಯ್ಯ, ರೆವಿನ್ಯೂ ಇನ್ಸ್ಪೆಕ್ಟರ್, ದೊಡ್ಡಬಳ್ಳಾಪುರ..
04. ವಾಸುದೇವ್, ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ ಬೆಂಗಳೂರು..
05. ಬಿ.ಕೃಷ್ಣಾರೆಡ್ಡಿ, ಜನರಲ್ ಮ್ಯಾನೇಜರ್, ನಂದಿನಿ ಡೈರಿ ಬೆಂಗಳೂರು..
06. ಟಿ.ಎಸ್.ರುದ್ರೇಶಪ್ಪ, ಜಾಯಿಂಟ್ ಡೈರೆಕ್ಟರ್, ಅಗ್ರಿಕಲ್ಚರ್ ಡಿಪಾರ್ಟ್‌ಮೆಂಟ್ ಗದಗ..
07. ಎ.ಕೆ.‌ಮಸ್ತಿ, ಕೋ ಆಪರೇಟಿವ್ ಡೆವಲಪ್ಮೆಂಟ್ ಆಫೀಸರ್, ಸವದತ್ತಿ ಡೆಪ್ಯೂಟೇಷನ್, ಬೈಲಹೊಂಗಲ..
08. ಸದಾಶಿವ ಮರಲಿಂಗಣ್ಣನವರ್, ಸೀನಿಯರ್ ಮೋಟಾರ್ ಇನ್ಸ್’ಪೆಕ್ಟರ್ ಗೋಕಾಕ್..
09.ನಾತಾಜೀ ಹೀರಾಜಿ ಪಾಟೀಲ್, ಗ್ರೂಪ್ ಸಿ ಹೆಸ್ಕಾಂ ಬೆಳಗಾವಿ..
10.ಕೆ.ಎಸ್.ಶಿವಾನಂದ್, ರಿಟೈರ್ಡ್ ಸಬ್ ರಿಜಿಸ್ಟರ್ ಬಳ್ಳಾರಿ..
11. ರಾಜಶೇಖರ್, ಫಿಜಿಯೋಥೆರಪಿಸ್ಟ್, ಯಲಹಂಕ ಸರ್ಕಾರಿ ಆಸ್ಪತ್ರೆ
12. ಮಾಯಣ್ಣ.ಎಂ, ಎಫ್.ಡಿ.ಸಿ ಬಿಬಿಎಂಪಿ, ರೋಡ್ಸ್ & ಇನ್ಸ್ಫಾಸ್ಟ್ರಕ್ಚರ್ ಬೆಂಗಳೂರು..
13. ಎಲ್.ಸಿ.ನಾಗರಾಜ್, ಸಕಾಲ, ಅಡ್ಮಿನಿಸ್ಟೇಷನ್ ಆಫಿಸರ್, ಬೆಂಗಳೂರು..
14. ಜಿ.ವಿ.ಗಿರಿ, ಡಿ ಗ್ರೂಪ್ ಸಿಬ್ಬಂದಿ, ಬಿಬಿಎಂಪಿ ಯಶವಂತಪುರ..
15. ಎಸ್.ಎಂ.ಬಿರಾದಾರ್, ಜಾಯಿಂಟ್ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ..

News First Live Kannada

Leave a comment

Your email address will not be published. Required fields are marked *