ಬೆಂಗಳೂರು: ನಗರದ ಗುಟ್ಟಹಳ್ಳಿ ಬಳಿಯ ಪ್ಲೈಓವರ್ ಮೇಲೆ ಇಂದು (ನವೆಂಬರ್ 15) ಬೆಳಿಗ್ಗೆ ಅಪಘಾತ ಸಂಭವಿಸಿದೆ. ಕ್ಯಾಂಟರ್ಗೆ ಅಪೇ ಆಟೋ ಡಿಕ್ಕಿ ಹೊಡೆದಿದೆ. ಕ್ಯಾಂಟರ್ ಡಿಕ್ಕಿಯಾಗಿ ಗೂಡ್ಸ್ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಆಟೋ ಚಾಲಕ ಪಾರಾಗಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಳೆಹಣ್ಣಿನ ಬಾಕ್ಸ್ಗಳನ್ನು ಮಾರುಕಟ್ಟೆಗೆ ಒಯ್ಯುತ್ತಿದ್ದ ವೇಳೆ ಅವಗಢ ಸಂಭವಿಸಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:
Araga Jnanendra: ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ನೆರವು ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ