ತುಮಕೂರು: ಬೈಕ್​​ಹಾಗೂ ಕಾರಿನ ನಡುವೆ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಶಿರಾ ನಗರದ ಪ್ರೆಸಿಡೆನ್ಸಿ ಬಳಿ ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ಬೈಕ್​​ಗೆ ಕಾರು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್​ಗೂ ಕೂಡ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

The post ಬೈಕ್​​ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು appeared first on News First Kannada.

Source: newsfirstlive.com

Source link