ಬಳ್ಳಾರಿ: ಬೈಕ್ ಹಾಗೂ ಲಾರಿ ನಡುವೆ ಅಪಘಾತವಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಪೇಟೆ ತಾಲೂಕಿನ ಡಣಾಪುರ್ ಗ್ರಾಮದ ಬಳಿ ನಡೆದಿದೆ. ಕೂಡ್ಲಿಗಿ ಮೂಲದ ಪಿಂಜಾರ್ ಖಾಸಿಂಸಾಬ್ ಮೃತ ದುರ್ದೈವಿ

ವೇಗವಾಗಿ ಬಂದ ಲಾರಿ ಬೈಕ್‌ಗೆ ಗುದ್ದಿದ ಪರಿಣಾಮ ಖಾಸಿಂಸಾಬ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

The post ಬೈಕ್​​ಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು appeared first on News First Kannada.

Source: newsfirstlive.com

Source link