ತುಮಕೂರು: ಗುಬ್ಬಿ ತಾಲ್ಲೂಕಿನ ಸಾಗರನಹಳ್ಳಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಮಚಂದ್ರ(30) ಹಾಗೂ ಪ್ರಿಯ(25) ಸಾವನ್ನಪಿದ ದುರ್ದೈವಿಗಳು. ಇವರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬೀರೂರು ಮೂಲದವರಾಗಿದ್ದು,ಬೆಂಗಳೂರು ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲೇ ಬೈಕ್ ಹೊತ್ತಿ ಉರಿದಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

The post ಬೈಕ್​​ಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಸವಾರ-ಮಹಿಳೆ ಸ್ಥಳದಲ್ಲೇ ಸಾವು appeared first on News First Kannada.

Source: newsfirstlive.com

Source link