ಬೈಕ್‌ಗೆ ಟಿಪ್ಪರ್ ಡಿಕ್ಕಿ; ತಾಯಿ, ಮಗು ಸ್ಥಳದಲ್ಲೇ ಸಾವು, ಬೈಕ್ ಸವಾರ ಆಸ್ಪತ್ರೆಗೆ ದಾಖಲು | Mother and son died after tipper lorry collided with bike in bengaluru

ಬೈಕ್‌ಗೆ ಟಿಪ್ಪರ್ ಡಿಕ್ಕಿ; ತಾಯಿ, ಮಗು ಸ್ಥಳದಲ್ಲೇ ಸಾವು, ಬೈಕ್ ಸವಾರ ಆಸ್ಪತ್ರೆಗೆ ದಾಖಲು

ಬೈಕ್‌ಗೆ ಟಿಪ್ಪರ್ ಡಿಕ್ಕಿ; ತಾಯಿ, ಮಗು ಸ್ಥಳದಲ್ಲೇ ಸಾವು, ಬೈಕ್ ಸವಾರ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ಮನಕಲಕುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ತಾಯಿ ಶ್ರೀದೇವಿ(21) ಮತ್ತು ಒಂದು ವರ್ಷದ ಮಗು ದೀಕ್ಷಿತ ಮೃತ ದುರ್ದೈವಿಗಳು.

ಕೆ.ಆರ್. ಪುರಂನಿಂದ ತಮಿಳುನಾಡಿನ ಧರ್ಮಪುರಿಗೆ ಬುಲೆಟ್ನಲ್ಲಿ ತೆರಳುತ್ತಿದ್ದ ವೇಳೆ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಶಿವಕುಮಾರ್ಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಎಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಯತಪ್ಪಿ ಬಿದ್ದ ಬೈಕ್ ಸವಾರ ಸಾವು
ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಿಂದ ಆಯತಪ್ಪಿ ಬೈಕ್ ಸವಾರ ಕೆಳಗೆ ಬಿದ್ದಿದ್ದು ಬೈಕ್ ಬೀಳುತ್ತಿದ್ದಂತೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕೂದಲೆಳೆ‌ ಅಂತರದಲ್ಲಿ ಬೈಕ್ ಸವಾರ ಪಾರಾದ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುವ ಪ್ರಮುಖ ರಸ್ತೆಯಲ್ಲಿ ಬೃಹತ್ ಗುಂಡಿ ಬಿದ್ದಿದ್ದು ಗುಂಡಿ ಮುಚ್ಚದ ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ವಿಜಯನಗರ: ಗೂಡ್ಸ್ ರೈಲಿಗೆ ಸಿಲುಕಿ ಕುರಿಗಾಹಿ ಮತ್ತು 18 ಕುರಿಗಳ ದಾರುಣ ಸಾವು

TV9 Kannada

Leave a comment

Your email address will not be published. Required fields are marked *