– ‘ನಾನು ಡಿಸಿಎಂ ಮಗ’ ಸ್ಥಳೀಯರಿಗೆ ಅವಾಜ್

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.

ಬೈಕ್‍ಗೆ ಕಾರ್ ಡಿಕ್ಕಿಯಾಗುತ್ತಿದ್ದಂತೆ ಡಿಸಿಎಂ ಪುತ್ರ ಚಿದಾನಂದ್ ನಂಬರ್ ಪ್ಲೇಟ್ ಕಲ್ಲಿನಿಂದ ಜಜ್ಜಿದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತವಾದ ಸ್ಥಳೀಯರು ಚಿದಾನಂದ್ ಸವದಿಯನ್ನು ಕೆಲಹೊತ್ತು ಹಿಡಿದಿಟ್ಟಿದ್ದರು. ಈ ವೇಳೆ ನಾನು ಡಿಸಿಎಂ ಲಕ್ಷ್ಮಣ್ ಸವದಿ ಮಗ ಅಂತ ಅವಾಜ್ ಹಾಕಿರುವ ಬಗ್ಗೆ ಸ್ಥಳೀಯರು ಹೇಳುತ್ತಿದ್ದಾರೆ.

The post ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರ್- ಸವಾರ ಸಾವು appeared first on Public TV.

Source: publictv.in

Source link