ಬೆಂಗಳೂರು:  ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬ್ರಾಹ್ಮಣರು ಭಯೋತ್ಪಾದಕರು ಎಂದು ಹೇಳಿದ್ದ ವಿಡಿಯೋವನ್ನ ನಟ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದರು. ಹೀಗಾಗಿ ಈ ಹೇಳಿಕೆಗೆ ಬ್ರಾಹ್ಮಣ ಸಮುದಾಯ ಕೆಂಡಾಮಂಡಲವಾಗಿದ್ದು ವಿಪ್ರ ಯುವ ವೇದಿಕೆಯಿಂದ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದು, ಐಪಿಸಿ 153(B) 295(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

The post ಬ್ರಾಹ್ಮಣ ಸಮುದಾಯದ ಬಗ್ಗೆ ವ್ಯಂಗ್ಯ ಹೇಳಿಕೆ: ನಟ ಚೇತನ್ ವಿರುದ್ಧ FIR appeared first on News First Kannada.

Source: newsfirstlive.com

Source link