ಬೆಂಗಳೂರು: ​ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಔಷಧ ಮಾರಟಕ್ಕೆ ಸರ್ಕಾರದಿಂದ ಬ್ರೇಕ್ ಬಿದ್ದಿದೆ. ರೆಮ್ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಮೂಲಕ ‌ರೆಮ್ಡೆಸಿವಿರ್ ಹಂಚಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ. ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.

ಸಾರ್ವಜನಿಕರು https://www.covidwar.karnataka.gov.in/service2/ ಈ ಲಿಂಕ್​​ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು. ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ  ಅಂತ ಆರೋಗ್ಯ ಸಚಿವ ಡಾ. ಸುಧಾಕರ್​ ಟ್ವೀಟ್​ ಮಾಡಿದ್ದಾರೆ.

The post ಬ್ಲಾಕ್​ ಮಾರ್ಕೆಟಿಂಗ್​ಗೆ ಬ್ರೇಕ್; ಇನ್ಮುಂದೆ ರೆಮ್ಡೆಸಿವಿರ್ ಹಂಚಿಕೆಯಾದ​ ಸೋಂಕಿತರಿಗೆ ಬರುತ್ತೆ SMS appeared first on News First Kannada.

Source: newsfirstlive.com

Source link