
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Image Credit source: Udayakala
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 13 ಸಾವಿರ ಕೋಟಿ ಹಣ ಮಂಜೂರು ಮಾಡಲಿದೆ. ಜೊತೆಗೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ (Bhadra Meldande Project)ಗೆ ಕೇಂದ್ರ ಸರ್ಕಾರ 13 ಸಾವಿರ ಕೋಟಿ ಹಣ ಮಂಜೂರು ಮಾಡಲಿದೆ. ಅಲ್ಲದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಭದ್ರಾ ಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದ ಹೆಚ್.ಎಲ್.ಗುಣ್ಣಯ್ಯ ವೇದಿಕೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಣ್ಣ ನೀರಾವರಿ ಇಲಾಖೆ, ಹಿರಿಯೂರು ತಾಲ್ಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರ ಧರ್ಮಪುರ ಕೆರೆ ಹಾಗೂ ಇತರೆ ಏಳು ಕೆರೆಗಳಿಗೆ ನೀರುಣಿಸುವ ಏತ ನೀರಾವರಿ ಯೋಜನೆಯ ಭೂಮಿಪೂಜೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.