ತುಮಕೂರು: ಕಳೆದ ರಾತ್ರಿ ಸುರಿದ ಭಾರಿ ಮಳೆ ಪರಿಣಾಮ ಕೊಟ್ಟಿಗೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿದ ಘಟನೆ ಕುಣಿಗಲ್ ತಾಲೂಕಿನ ಮೆಣಸಿನಕೆರೆ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಸಿದ್ದೇಗೌಡ (60) ಮೃತ ದುರ್ದೈವಿ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಮಳೆ ಸುರಿಯುತ್ತಿದ್ದು ಅವಾಂತರ ಸೃಷ್ಟಿಸಿದೆ. ನಿನ್ನೆ ರಾತ್ರಿ ಹಸುಗಳಿಗೆ ಮೇವು ಹಾಕಲು ಹೋದಾಗ ಗೋಡೆ ಕುಸಿದು ವ್ಯಕ್ತಿ ಮೇಲೆ ಬಿದ್ದು ಈ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಹಾಬಲೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಮಳೆ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು