ರಾಯಚೂರು: ನಿರಂತರ ಮಳೆ ಹಿನ್ನೆಲೆ ಜಿಲ್ಲಾಡಳಿತ ಅಲರ್ಟ್ ಆಗಿದ್ದು, ನದಿ ಪಾತ್ರದ ಗ್ರಾಮಗಳ ಬಗ್ಗೆ ಹೆಚ್ಚು ನಿಗಾ ವಹಿಸಿದೆ. ಪ್ರವಾಹ ಮುನ್ಸೂಚನೆ ಹಿನ್ನೆಲೆ ಎನ್‌ಡಿಆರ್‌ಎಫ್‌ ತಂಡ ಜಿಲ್ಲೆಯಲ್ಲೇ ಬೀಡುಬಿಟ್ಟಿದೆ.

ಕೃಷ್ಣಾ ನದಿಯ ಪ್ರವಾಹ ಪೀಡಿತ ಗ್ರಾಮಗಳಾದ ರಾಯಚೂರು ತಾಲೂಕಿನ ಕೆರೆಕಲ್, ಕಾಡ್ಲೂರು, ಗುರ್ಜಾಪುರ ಮತ್ತು ಅರಶಿಣಗಿ ಗ್ರಾಮಗಳಿಗೆ ಎನ್‌ಡಿಆರ್‌ಎಫ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಧಿಕಾರ ಸಭೆಯ ನಿರ್ದೇಶನದಂತೆ ಅಧಿಕಾರಿಗಳು ಎನ್‍ಡಿಆರ್‍ಎಫ್ ತಂಡದೊಂದಿಗೆ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.

ಸಾರ್ವಜನಿಕರೊಂದಿಗೆ ಮತ್ತು ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರೊಂದಿಗೆ ಪ್ರವಾಹದ ಕುರಿತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಎನ್‍ಡಿಆರ್‍ಎಫ್ ತಂಡದ ಇನ್‍ಸ್ಪೆಕ್ಟರ್ ಗಳಾದ ಅಬೀನ್, ಬೂಪೇಂದ್ರ ಹಾಗೂ ತಂಡದ ಸದಸ್ಯರು, ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.

The post ಭಾರೀ ಮಳೆ, ಪ್ರವಾಹ ಭೀತಿ- ರಾಯಚೂರಲ್ಲಿ ಬೀಡುಬಿಟ್ಟ ಎನ್‌ಡಿಆರ್‌ಎಫ್‌ ತಂಡ appeared first on Public TV.

Source: publictv.in

Source link