ಭಾರೀ ಮಳೆ; ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ 2 ದಿನ ರಜೆ


ಚಿಕಬಳ್ಳಾಪುರ: ರಾಜ್ಯದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮುಂಜಾಗೃತ ಕ್ರಮಾವಾಗಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಎರಡು ದಿನಗಳವರೆಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಆದೇಶ ಹೊರಡಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಡಿಡಿಪಿಐ ಕೆ. ಎಂ. ಜಯರಾಮರೆಡ್ಡಿ ಹವಾಮಾನ ಮುನ್ಸೂಚನೆ ಇಲಾಖೆಯಿ ಕೂಡ ಮುಂದಿನ 2 ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ ಕುರಿತು ತಿಳಿಸಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನವೆಂಬರ್​ 19 ಮತ್ತು 20ರಂದು 2 ದಿನಗಳ ಕಾಲ ಜಿಲ್ಲಾಧಿಕಾರಿ ಸೂಚನೆಯಂತೆ ಎಲ್ಲ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸುವುದಾಗಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಮನೆಯಿಂದ ಹೊರಡುವ ಮುನ್ನ ಎಚ್ಚರ.. ಇನ್ನೆರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆ ಎಚ್ಚರಿಕೆ

News First Live Kannada


Leave a Reply

Your email address will not be published. Required fields are marked *