ಭೀಕರ ಕಾರು ರಸ್ತೆ ಅಪಘಾತ; 6 ಮಂದಿ ಸಾವು


ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಕೇಶ್ವಾನ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಾಹನವು ಅಪಘಾತಕ್ಕೆ ಒಳಗಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಾಹನದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 6ನೇ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಮೃತರನ್ನ ಮೊಹಮ್ಮದ್ ಅರ್ಖಾನ್​, ಅಬ್ದುಲ್ ರೆಹಮಾನ್​, ಅಬ್ದುಲ್ ಲತೀಫ್, ಅತಾ ಮೊಹಮ್ಮದ್, ಇನಾಮ್​ ಮತ್ತು ಜಮೀರ್ ಎಂದು ಗುರುತಿಸಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮತ್ತು ಸೇನಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಜವಾದ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

News First Live Kannada


Leave a Reply

Your email address will not be published.